ಶನಿವಾರ, ಅಕ್ಟೋಬರ್ 11, 2025

www.ksoumysuru.ac.in

ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಬಿಎ, ಬಿ.ಕಾಂ, ಬಿಎಸ್ಸಿ, ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯೂ, ಬಿ.ಲಿಬ್ ಐಎಸ್ಸಿ, ಎಂಎ, ಎಂ,ಕಾಂ, ಎಂಬಿಎ, ಎಂಸಿಎ, ಎಂಎಸ್ಸಿ, ಎಂಎಸ್‌ಡಬ್ಲ್ಯೂ, ಎಂ.ಲಿಬ್ ಐಎಸ್‌ಸಿ, ಪಿ.ಜಿ. ಸರ್ಟಿಫಿಕೇಟ್ ಪ್ರೊಗ್ರಾಮ್, ಡಿಪ್ಲೊಮಾ ಪ್ರೊಗ್ರಾಮ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮ್‌ಗಳಿಗೆ ಪ್ರವೇಶ ಪ್ರಾರಂಭವಾಗಿದೆ.

ಅಭ್ಯರ್ಥಿಗಳು ವಿವಿಯ ವೆಬ್‌ಸೈಟ್ www.ksoumysuru.ac.in ನಲ್ಲಿ ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ವಿವಿಯ ರಾಮನಗರ ಪ್ರಾದೇಶಿಕ ಕೇಂದ್ರಕ್ಕೆ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ. ಶುಲ್ಕದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ವಿಶೇಷ ರಿಯಾಯಿತಿ: ಬಿಪಿಎಲ್ ಕಾರ್ಡ್ ಹೊಂದಿರುವ ಅರ್ಹ ಮಹಿಳಾ ವಿದ್ಯಾರ್ಥಿಗಳಿಗೆ, ರಕ್ಷಣಾ ಹಾಗೂ ಮಾಜಿ ಸೈನಿಕರ ಮಕ್ಕಳಿಗೆ, ಆಟೊ ಮತ್ತು ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಮತ್ತು ಕೆಎಸ್‌ಆರ್‌ಟಿಸಿ/ಬಿಎಂಟಿಸಿ ನೌಕರರಿಳಿಗೆ ಬೋಧನಾ ಶುಲ್ಕದಲ್ಲಿ ಶೇ 10ರಷ್ಟು ರಿಯಾಯಿತಿ ಸಿಗಲಿದೆ (ಯುಜಿ ಮತ್ತು ಪಿ,ಜಿ ಪದವಿ ಪ್ರೋಗ್ರಾಂ ಮಾತ್ರ).

ಕೋವಿಡ್‌ನಿಮದ ಮೃತರಾದ ತಂದೆ/ತಾಯಿಯ ಮಕ್ಕಳಿಗೆ ಅವರು ಅರ್ಹತೆ ಹೊಂದಿ ಪ್ರವೇಶ ಬಯಸುವ ಶಿಕ್ಷಣ ಕ್ರಮಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಶೇ 50ಕ್ಕೂ ಹೆಚ್ಚಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ (ಬಿ.ಇಡಿ ಮತ್ತು ಎಂಬಿಎ ಕಾರ್ಯಕ್ರಮಗಳಿಗೆ ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ತೃತೀಯ ಲಿಂಗ ವಿದ್ಯಾರ್ಥಿಗಳಿಗೂ ಶುಲ್ಕ ವಿನಾಯಿತಿ ಸಿಗಲಿದೆ. ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿ ಸರ್ಕಾರದ ಎಸ್‌ಎಸ್‌ಪಿ ಮುಖಾಂತರ ವಿದ್ಯಾರ್ಥಿವೇತನ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ರಾಮನಗರ ಪ್ರಾದೇಶಿಕ ಕೇಂದ್ರ, ನಂ. 103, 'ಇ' ಬ್ಲಾಕ್, ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ಬಿ.ಎಂ.ರಸ್ತೆ, ವಿವೇಕಾನಂದನಗರ, ರಾಮನಗರ-562159. ಮೊಬೈಲ್ ಸಂಖ್ಯೆ:-9448668880, 8861732487, 8618501602, 9743184848 ಹಾಗೂ 9900356226 ಸಂಪರ್ಕಿಸಬೇಕು ಎಂದು ವಿವಿಯ ಪ್ರಾದೇಶಿಕ ನಿರ್ದೇಶಕ ಗಿರೀಶ ಎಚ್.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

SBI scholarship

http://somalinggovernmentemployees76.blogspot.com/2025/10/blog-post_21.html

BCMHOSTEL2077