ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ (NLSIU Faculty Positions Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 21
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 2
ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸೋಷಿಯಲ್ ಸೈನ್ಸ್, ಕಾನೂನು ಸೇರಿ ಹಲವು ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.nls.ac.in/ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ